ಹೆಬ್ರಿ ಎಸ್.ಆರ್ ಪದವಿ ಪೂರ್ವ ಕಾಲೇಜು: ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ.

ಹೆಬ್ರಿ: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ, ಕೆಂಪೇಗೌಡ ಜನ್ಮದಿನಾಚರಣೆಯ ಪ್ರಯುಕ್ತ ಆಯೋಜಿಸಿದ ಹೆಬ್ರಿ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಎಸ್.ಆರ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸ್ಫೂರ್ತಿ ಪ್ರಥಮ ಸ್ಥಾನ ಮತ್ತು ಸನಿಹ ತೃತೀಯ ಸ್ಥಾನ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಾಣಿಜ್ಯ ವಿಭಾಗದ ಶಶಿಧರ್ ಸಮಾಧಾನಕರ ಬಹುಮಾನ ಪಡೆದಿದ್ದಾರೆ.

ವಿಜೇತ ವಿದ್ಯಾರ್ಥಿಗಳನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅಭಿನಂದಿಸಿದರು.