ಜುಲೈ 4ರಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 4ರಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಬನ್ನಂಜೆ ಶ್ರೀ ನಾರಾಯಣಗುರು ಆಡಿಟೋರಿಯಂನಲ್ಲಿ ನಡೆಯಲಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆ ಜ್ಯೋತಿ ಕೃಷ್ಣ ಹೆಬ್ಬಾರ್ ಅವರು, ಈ ಸಮಾರಂಭದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಮತ್ತು ರಾಜ್ಯ ಗ್ಯಾರಂಟಿ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಕೆ.ಗೋಪಾಲ್ ಪೂಜಾರಿ, ಎಂ.ಎ. ಗಫೂರ್, ನಾಯಕರುಗಳಾದ ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯ ಶೆಟ್ಟಿ, ರಮೇಶ್ ಕಾಂಚನ್ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ನಾಯಕಿಯರಾದ ಗೀತಾ ವಾಗ್ಳೆ, ವೆರೋನಿಕಾ ಕರ್ನೇಲಿಯೊ, ಚಂದ್ರಿಕಾ ಶೆಟ್ಟಿ, ಭಾನು ಭಾಸ್ಕರ್, ಮೀನಾಕ್ಷಿ ಮಾಧವ ಬನ್ನಂಜೆ, ಸಂಧ್ಯಾ ತಿಲಕ್ ರಾಜ್, ಪುಷ್ಪ ಅಂಚನ್ ಇದ್ದರು.