ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ ಸ್ಟಿಟ್ಯೂಟ್ ನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಗತಿ ಆರಂಭ

ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಗತಿ ಆರಂಭ ಕಳೆದ 14 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಮಣಿಪಾಲದ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ 2024-25ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯನ್ನು ವಿಧ್ಯುಕ್ತವಾಗಿ ಆರಂಭವಾಯಿತು.

ತರಬೇತಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಡಾ. ಎನ್.ವಿ. ಕಾಮತ್ ಅವರು ಮಾತ್ರವಲ್ಲದೇ ಅತಿಥಿಗಳಾಗಿ ಶ್ರೀಮತಿ ಚಂದ್ರಕಲಾ, ಶ್ರೀಮತಿ ಚೇತನಾ ಅವರೂ ಭಾಗವಹಿಸಿ ದೀಪ ಪ್ರಜ್ವಲನದ ಮೂಲಕ ಉದ್ಘಾಟನೆಯನ್ನು ನೆರವೇರಿಸಿದರು.

ಸಂಸ್ಥೆಯ ಪ್ರಾಂಶುಪಾಲೆ ಶ್ರೀಮತಿ ಸುನೀತಾ ಅವರು ಸಂಸ್ಥೆಯು ನಡೆದು ಬಂದ ದಾರಿ ಹಾಗೂ ಅದರ ಕಾರ್ಯವೈಖರಿಯ ಬಗ್ಗೆ ವಿವರಿಸಿದರು. ಈ ಸಂಸ್ಥೆಯ ಮೂಲಕ ತರಬೇತಿ ಪಡೆದವರು ಶಿಕ್ಷಕಿಯರಾಗಿ ಅನೇಕ ಶಿಕ್ಷಣ ಸಂಸ್ಥೆಗಳಲ್ಲಿ ವೃತ್ತಿನಿರತರಾಗಿರುವುದರ ಬಗ್ಗೆ ತಿಳಿಸಿ ಸಂಸ್ಥೆಯು ತನ್ನದೇ ಆದ ಖ್ಯಾತಿಗಳಿಸಿರುವುದನ್ನು ಗಮನಕ್ಕೆ ತಂದರು. ಶ್ರೀಮತಿ ಚಂದ್ರಕಲಾ ಅವರು ತರಬೇತಿ ಪಡೆದು ಶಿಕ್ಷಕರಾಗುವವರು ಮೊದಲು ಮಕ್ಕಳ ಮನಸ್ಸನ್ನು ತಿಳಿದುಕೊಳ್ಳಲು ಯತಿಸಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾದ ಡಾ. ಎನ್. ವಿ.ಕಾಮತ್ ಅವರು ಚಿಕ್ಕ ಮಕ್ಕಳನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಮಾಡುವ ಹೊಣೆಗಾರಿಕೆಯ ದೊಡ್ಡ ಪಾಲು ಮೊಂಟೆಸ್ಸರಿ ಶಿಕ್ಷಕಿಯರದ್ದಾಗಿದೆ ಎಂದು ತಿಳಿಸಿದರು.

ತರಬೇತುದಾರರಾಗಿರುವ ಶ್ರೀಮತಿ ದಿವ್ಯಾ ಕೋಟ್ಯಾನ್ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತ ಹಾಗೂ ಧನ್ಯವಾದ ಸಮರ್ಪಣೆಯನ್ನು ನಡೆಸಿಕೊಟ್ಟರು. ಶ್ರೀಮತಿ ಚೇತನಾ ಅವರು ಸಂಕ್ಷಿಪ್ತವಾಗಿ ಶಿಕ್ಷಕಿಯರ ಹೊಣೆಗಾರಿಕೆ ಬಗ್ಗೆ ತಿಳಿಸಿದರು. ರಾಷ್ಟ್ರಗೀತೆಯೊಂದಿಗೆ ಸಮಾರಂಭವು ಮುಕ್ತಾಯಗೊಂಡಿತು.