ಹಿಂ.ವರ್ಗದ ವಿದ್ಯಾರ್ಥಿಗಳಿಗೆ ಡಿ. ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನ – ಅರ್ಜಿ ಆಹ್ವಾನ

ಉಡುಪಿ: 2019-20 ನೇ ಸಾಲಿನಲ್ಲಿ ವಿದೇಶಿ ವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ ಪಿಹೆಚ್‍ಡಿ ವ್ಯಾಸಾಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡಲಾಗುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು  ಆಹ್ವಾನಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 15.

ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ ಅನ್ನು ಹಾಗೂ ದೂರವಾಣಿ ಸಂಖ್ಯೆ; 080-2574881 / 0820-2573881 ಅನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.