ಭಯೋತ್ಪಾದನೆಯನ್ನು ಖಂಡಿಸುವುದು ನಮ್ಮ ಮುಖ್ಯ ಉದ್ದೇಶವಾಗಬೇಕು; ಪ್ರಧಾನಿ ಮೋದಿ

ಬ್ರೆಜಿಲ್: ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಪಾಕಿಸ್ತಾನದ ಮೇಲೆ ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸುವಲ್ಲಿ ಭಾರತದ ಪರವಾಗಿ ನಿಂತ ರಾಷ್ಟ್ರಗಳಿಗೆ ಧನ್ಯವಾದ ಅರ್ಪಿಸಿ, ಪಾಕಿಸ್ತಾನವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಪಹಲ್ಗಾಮ್‌ನಲ್ಲಿ ನಡೆದ ಪಾಕಿಸ್ತಾನ ಸಂಬಂಧಿತ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದರು, ನಂತರ ಭಾರತ ಆಪರೇಷನ್ ಸಿಂಧೂರ್ ನ್ನು ಪ್ರಾರಂಭಿಸಿ ಪಾಕಿಸ್ತಾನದಲ್ಲಿನ ಭಯೋತ್ಪಾದಕ ಮೂಲಸೌಕರ್ಯ, ವಾಯುನೆಲೆಗಳನ್ನು ವಿಮಾನ ನಿಗ್ರಹ ಕ್ಷಿಪಣಿ ವ್ಯವಸ್ಥೆಗಳಂತಹ ಮಿಲಿಟರಿ ಗುರಿಗಳನ್ನು ನಾಶಪಡಿಸಿತು.

ಪಾಕಿಸ್ತಾನ ಉಗ್ರವಾದವನ್ನು ಬೆಂಬಲಿಸುತ್ತಿರುವ ರಾಷ್ಟ್ರವಾದರೂ ಭಾರತ ಭಯೋತ್ಪಾದನೆಯ ಬಲಿಪಶುವಾಗಿದೆ ಮತ್ತು ಆದ್ದರಿಂದ ಬಲಿಪಶುಗಳು ಮತ್ತು ಬೆಂಬಲಿಗರನ್ನು ಒಂದೇ ತಕ್ಕಡಿಯಲ್ಲಿ ತೂಗಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ವಿಶ್ವ ನಾಯಕರಿಗೆ ತಿಳಿಸಿದ್ದಾರೆ.

ವೈಯಕ್ತಿಕ ಅಥವಾ ರಾಜಕೀಯ ಲಾಭಕ್ಕಾಗಿ ಭಯೋತ್ಪಾದನೆ ಹರಡುವಿಕೆಯ ವಿರುದ್ಧ ಏನನ್ನೂ ಹೇಳುವ ಅಥವಾ ಮಾಡದವರ ಬಗ್ಗೆಯೂ ಅವರು ಪ್ರಸ್ತಾಪಿಸಿದರು ಮತ್ತು ಭಯೋತ್ಪಾದಕರಿಗೆ ಮೌನ ಒಪ್ಪಿಗೆ ನೀಡುವುದನ್ನು ಸ್ವೀಕಾರಾರ್ಹವಲ್ಲ ಎಂದು ಒತ್ತಿ ಹೇಳಿದರು.

ಪಾಕಿಸ್ತಾನ ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವ ಮೂಲಕ ಭಯೋತ್ಪಾದನೆಯನ್ನು ರಾಷ್ಟ್ರ ನೀತಿಯಾಗಿ ಹೇಗೆ ಬಳಸುತ್ತಿದೆ ಎಂಬುದನ್ನು ಭಾರತ ಹಲವು ಬಾರಿ ಸ್ಪಷ್ಟ ಪುರಾವೆಗಳೊಂದಿಗೆ ತೋರಿಸಿದೆ.