ಕೋಟ: ಮಂಗಳೂರಿನ ಎಸ್. ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಆಚರಣೆಯ ಪ್ರಯುಕ್ತ ಮಂದಾರ್ತಿ ಸಮೀಪ ಬಿಲ್ಲಾಡಿ ಗ್ರಾಮದ ಬೂದಾಡಿಯ ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಹೊಸ ಮನೆಯ ಹಸ್ತಾಂತರ ಜು.6 ರಂದು ಜರುಗಿತು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನೆ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವಕರ್ಮ ಸಮಾಜ ಪ್ರಾಮಾಣಿಕತೆ ಹಾಗೂ ಕಠಿಣ ದುಡಿಮೆಗೆ ಹೆಸರುವಾಸಿಯಾಗಿದೆ. ಸಂಸ್ಥೆಯ ಈ ಕಾರ್ಯಕ್ರಮ ಸಮಾಜಕ್ಕೆ ಮಾದರಿ ಎಂದರು.

ಸೊಸೈಟಿಯ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಣೇಶ್ ಆಚಾರ್ಯ ದಂಪತಿಗಳ ಮನೆ ಪೂರ್ತಿ ಬೀಳುವ ಸ್ಥಿತಿಯಲ್ಲಿದ್ದು, ತೀರ ಸಂಕಷ್ಟದಲ್ಲಿದ್ದರು. ಹೀಗಾಗಿ ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯವರು ಮುತುವರ್ಜಿ ವಹಿಸಿಕೊಂಡು 7,60,000 ರೂ. ವೆಚ್ಚದಲ್ಲಿ ಸುಸಜ್ಜಿತ ಮನೆಯ ನಿರ್ಮಾಣ ಮಾಡಲಾಗಿದೆ ಎಂದರು.
ಶಾಸಕ ಕಿರಣ್ ಕುಮಾರ್ ಕೋಟಿಗೆ ಶುಭ ಹಾರೈಸಿದರು. ಈ ಸಂದರ್ಭ ಮನೆಯ ಮಾಲಕರಾದ ಲಲಿತಾ ಮತ್ತು ಗಣೇಶ್ ಆಚಾರ್ಯ ದಂಪತಿಗೆ ಮನೆ ಹಸ್ತಾಂತರಿಸಲಾಯಿತು. ಉಪವಲಯ ಅರಣ್ಯಾಧಿಕಾರಿ ಮಂಜುನಾಥ ಸಸಿ ವಿತರಣೆ ನಡೆಸಿದರು.
ಬಾರ್ಕೂರು ಕಾಳಿಕಾಂಬ ದೇವಸ್ಥಾನದ ಆಡಳಿತ ಮೋಕ್ತೇಸರ ಶ್ರೀಧರ ಆಚಾರ್ ವಡೇರ ಹೋಬಳಿ, ಬಿಲ್ಲಾಡಿ ಗ್ರಾಂ.ಪಂ. ಅಧ್ಯಕ್ಷೆ ಸರಸ್ವತಿ ಬಾಯಿ ವಂಡಾರು, ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದ ರಥ ಶಿಲ್ಪಿ ರಾಜಗೋಪಾಲ ಆಚಾರ್ಯ, ನಿರ್ದೇಶಕ ಕೆ ಯಜ್ನೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ವಿ. ಜಯ ಆಚಾರ್, ಕೆ. ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್. ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು., ಕೆ. ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ್ ಎ. ಎಸ್. ಇದ್ದರು.
ಸಂಸ್ಥೆಯ ಉಪಾಧ್ಯಕ್ಷ ಎ.ಆನಂದ ಆಚಾರ್ಯ ಸ್ವಾಗತಿಸಿ, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಪ್ರಾಸ್ತವಿಕ ಮಾತನಾಡಿದರು. ಶ್ರೀಕಾಂತ್ ಕಾರ್ಯಕ್ರಮ ನಿರೂಪಿಸಿ, ಪ್ರಭಾರ ಶಾಖಾ ವ್ಯವಸ್ಥಾಪಕಿ ಪೂರ್ಣಿಮಾ ಎಸ್. ಆಚಾರ್ಯ ವಂದಿಸಿದರು.

















