ಬೆಂಗಳೂರು ಚಿನ್ನಸ್ವಾಮಿ ಕಾಲ್ತುಳಿತ‌ ಪ್ರಕರಣ: ಕಾಲ್ತುಳಿತಕ್ಕೆ ಆರ್‌ಸಿಬಿಯೇ ಕಾರಣ; ಮ್ಯಾಜಿಸ್ಟ್ರೇಟ್ ತನಿಖಾ ವರದಿ.

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ‌ ಪ್ರಕರಣದ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರದಿ ಸಲ್ಲಿಸಿದ್ದಾರೆ. ವರದಿಯಲ್ಲಿ ಕಾಲ್ತುಳಿತಕ್ಕೆ ಆರ್‌ಸಿಬಿಯೇ ಕಾರಣ ಎಂದು ಉಲ್ಲೇಖಿಸಲಾಗಿದೆ. ಆರ್‌ಸಿಬಿ ಮ್ಯಾನೇಜ್ಮೆಂಟ್ ಪೊಲೀಸರ ಅನುಮತಿ ಪಡೆಯದೇ ಫ್ರೀ ಪಾಸ್‌ ಎಂದು ಘೋಷಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಘಟನೆಗೆ ನಾಲ್ವರು ಕಾರಣರಾಗಿದ್ದಾರೆ. ನಾಲ್ವರಲ್ಲಿ ಆರ್‌ಸಿಬಿ ಮ್ಯಾನೇಜ್ಮೆಂಟ್ ನಿರ್ಧಾರವೇ ದೊಡ್ಡ ತಪ್ಪು. ಮೊದಲನೇ ಸ್ಥಾನದಲ್ಲಿ ಆರ್‌ಸಿಬಿ ಮ್ಯಾನೇಜ್ಮೆಂಟ್, ಎರಡನೇ ಸ್ಥಾನದಲ್ಲಿ ಡಿಎನ್‌ಎ , ಮೂರನೇ ಸ್ಥಾನದಲ್ಲಿ ಕೆಎಸ್‌ಸಿಎ ಹಾಗೂ ನಾಲ್ಕನೇ ಸ್ಥಾನದಲ್ಲಿ ಪೊಲೀಸರದ್ದು ಎಂದು ಉಲ್ಲೇಖಿಸಲಾಗಿದೆ.

ಪ್ರಕರಣ ವಿವರ:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂಜಾಬ್ ವಿರುದ್ಧ 6 ರನ್‌ಗಳ ಭರ್ಜರಿ ಜಯ ಸಾಧಿಸಿ, 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹಚ್ಚು ಮಂದಿ ಅಭಿಮಾನಿಗಳು ಮೃತಪಟ್ಟಿದ್ದರು.