ಹಿರಿಯಡಕ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಹಿರಿಯಡಕ: ಮಹಿಳೆಯೊಬ್ಬರು ಅನಾರೋಗ್ಯದಿಂದ ಬಳಲುತಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಜು.16 ರಂದು ರಾತ್ರಿ ಅಂಜಾರು ಗ್ರಾಮದ ತನ್ನ ಮನೆಯ ಮಲಗುವ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬಾಲಕೃಷ್ಣ ಎಂಬವರ ಪತ್ನಿ ರೇಖಾ (44) ಎಂದು ಗುರುತಿಸ ಲಾಗಿದೆ.

ಅನಾರೋಗ್ಯಕ್ಕೆ ಮಣಿಪಾಲ ಹಾಗೂ ಉಡುಪಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದ ಇವರು ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.