ಎಂಜಿನ್ ವೈಫಲ್ಯ: ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನ ತುರ್ತು ಭೂ ಸ್ಪರ್ಶ.!

ಮುಂಬೈ: ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನವು ಎಂಜಿನ್‌ ವೈಫಲ್ಯದ ಕಾರಣ ಮುಂಬೈನಲ್ಲಿ ಬುಧವಾರ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ.ವಿಮಾನವು ರಾತ್ರಿ 9.52 ಗಂಟೆಗೆ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ ಒಟ್ಟು ಎಷ್ಟು ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

ದೆಹಲಿಯಿಂದ ಗೋವಾ ಮಾರ್ಗದಲ್ಲಿ ಸಾಗುತ್ತಿದ್ದ ವಿಮಾನದಲ್ಲಿ ಒಂದು ಎಂಜಿನ್‌ ವೈಫಲ್ಯ ಕಂಡುಬಂದ ಕೂಡಲೇ ಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.