ಕಾರ್ಕಳ: ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವ ವಿ.ಸುನಿಲ್ ಕುಮಾರ್ ಅವರ ತಂದೆಯವರಾದ ವಾಸುದೇವ (87) ಅವರು ಗುರುವಾರ ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ, ಪುತ್ರರಾದ ಶಾಸಕ ಸುನಿಲ್ ಕುಮಾರ್ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ವರ್ಗವನ್ನು ಅಗಲಿದ್ದಾರೆ.
ಮೃತರ ಪಾರ್ಥೀವಶರೀರ ಇಂದು ಮಧ್ಯಾಹ್ನ 1 ಗಂಟೆಗೆ ಕಾರ್ಕಳದ ಕಲಂಬಾಡಿಪದವಿನ ಶಾಸಕರ ನಿವಾಸಕ್ಕೆ ಆಗಮಿಸಲಿದ್ದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 4 ಗಂಟೆಗೆ ಅಂತಿಮ ವಿಧಿ ವಿಧಾನ ಕಾರ್ಯ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.












