4ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

ಜೈಪುರ: ರಾಜಸ್ಥಾನದ ಸಿಕಾರ್‌ನ ಶಾಲೆಯೊಂದರಲ್ಲಿ 4ನೇ ತರಗತಿ ವಿದ್ಯಾರ್ಥಿನಿ ಒಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ಆದರ್ಶ ವಿದ್ಯಾ ಮಂದಿರ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಪ್ರಾಚಿ ಕುಮಾವತ್ (9).

ಈ ಕುರಿತು ಪ್ರತಿಕ್ರಿಯಿಸಿದ ಶಾಲೆಯ ಪ್ರಾಂಶುಪಾಲ ನಂದಕಿಶೋರ್, ಎಲ್ಲಾ ವಿದ್ಯಾರ್ಥಿಗಳು ಮಧ್ಯಾಹ್ನ ಊಟ ಮಾಡುತ್ತಿದ್ದರು. 4ನೇ ತರಗತಿಯ ವಿದ್ಯಾರ್ಥಿನಿ ಟಿಫಿನ್ ಬಾಕ್ಸ್ ತೆರೆಯುವಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದ್ದಾಳೆ. ಶಾಲಾ ಸಿಬ್ಬಂದಿ ತಕ್ಷಣ ಪ್ರಜ್ಞಾಹೀನ ಮಗುವನ್ನು ದಂತಾರಾಮ್‌ಗಢ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ವೈದ್ಯರು ಆರಂಭಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಸಿಕಾರ್‌ನ ಎಸ್‌ಕೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಬಾಲಕಿಗೆ ಮತ್ತೊಮ್ಮೆ ಹೃದಯಾಘಾತವಾಗಿದೆ. ಇದರಿಂದ ಬಾಲಕಿ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.