ಬ್ರಹ್ಮಾವರ: ಬ್ರಹ್ಮಾವರ ತಾಲೂಕು ವಲಯದ ಸೌಹಾರ್ದ ಸಹಕಾರಿ ಸಂಘಗಳ ವಾರ್ಷಿಕ ಅವಲೋಕನ ಸಭೆಯು ಜು.18 ರಂದು ಜೈ ಗಣೇಶ್ ಸೌಹಾರ್ದ ಸಹಕಾರಿ ಸಂಘದ ನೂತನ ಕಟ್ಟಡ”ಸೌಹಾರ್ದ ಸಿರಿ” ಯಲ್ಲಿ ನಡೆಯಿತು.
ಸಂಸ್ಥೆಯ ಅಧ್ಯಕ್ಷ ಅಶೋಕ್ ಪ್ರಭು ಸಾಹೇಬರಕಟ್ಟೆ, ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ನಿರ್ದೇಶಕ ಮಂಜುನಾಥ ಎಸ್ ಕೆ, ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟದ ಅಧ್ಯಕ್ಷ ಅಂಪಾರು ಜಗನ್ನಾಥ ಶೆಟ್ಟಿ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ ಬಿ ಎಸ್, ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲೋಹಿತ್ ಜಿ ಸಾಲ್ಯಾನ್, ಜೈ ಗಣೇಶ್ ಸೌಹಾರ್ದ ಸಹಕಾರಿ ಯ ಮುಖ್ಯ ಕಾರ್ಯನಿರ್ವಾಹಕ ಶಿವಾನಂದ ಶ್ಯಾನುಭಾಗ್ ಸೇರಿದಂತೆ ಒಟ್ಟು 23 ಸಹಕಾರ ಸಂಘಗಳ 45 ಮಂದಿ ಪ್ರತಿನಿಧಿಗಳು ಭಾಗವಹಿಸಿದ್ದರು.












