ಸೆ.29 : ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪದವಿ ಪ್ರಧಾನ

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2018-19 ನೇ ಶೈಕ್ಷಣಿಕ ಸಾಲಿನ ಪದವಿಪ್ರದಾನ ಸಮಾರಂಭವು ಸಪ್ಟೆಂಬರ್29 ರಂದು ಬೆಳಗ್ಗೆ 10 ಗಂಟೆಗೆ ನಿಟ್ಟೆಯ ಸದಾನಂದ ಸಭಾಂಗಣದಲ್ಲಿ ನಡೆಯಲಿದೆ.

ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ ಕಸ್ತೂರಿರಂಗನ್ ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ನಿಟ್ಟೆ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಎನ್ ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿರುವರು.

ಈ ಪದವಿಪ್ರದಾನ ಸಮಾರಂಭದಲ್ಲಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಬಿ.ಇ, ಎಂ.ಟೆಕ್ ಹಾಗೂ ಎಂ.ಸಿ.ಎ ವಿದ್ಯಾರ್ಥಿಗಳಿಗೆ ಪದವಿಪ್ರದಾನ ಮಾಡಲಾಗುವುದು ಹಾಗೂ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳನ್ನು ಗುರುತಿಸಲಾಗುವುದು.

ಕಳೆದ ವರ್ಷದಂತೆ ಈ ಕಾರ್ಯಕ್ರಮವನ್ನು ಲೈವ್ ವೆಬ್‌ಕಾಸ್ಟ್ ಮಾಡುವ ಯೋಜನೆಯನ್ನು ಸಂಸ್ಥೆಯು ರೂಪಿಸಿದ್ದು, ಕಾರ್ಯಕ್ರಮದ ಲೈವ್ ವೀಕ್ಷಣೆಗಾಗಿ nmamit.nitte.edu.in   ಲಿಂಕ್‌ನ್ನು ಉಪಯೋಗಿಸಬಹುದಾಗಿದೆ ಎಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.