ಹಾಲಿನ ಉತ್ಪಾದನೆ 6 ಲಕ್ಷ ಲೀಟರ್ ಗೆ ಹೆಚ್ಚಿಸಿ- ಡಾ. ಎಂ.ಎನ್. ರಾಜೇಂದ್ರ ಕುಮಾರ್

ಉಡುಪಿ: ಹೈನುಗಾರರ ಪರಿವಾರ ಒಕ್ಕೂಟ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಸಂವಾದ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರುಗಳಿಗೆ ಅಭಿನಂದನಾ ಸಮಾರಂಭ ನಗರ ಪುರಭವನದಲ್ಲಿ ಇಂದು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು, ಹಾಲು ಉತ್ಪಾದಿಸುವ ವೆಚ್ಚ ಜಾಸ್ತಿ ಇರುವುದರಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಅನುದಾನ ಕೊಡಬೇಕೆಂದು ಸಹಕಾರಿ ಸಚಿವರಲ್ಲಿ ಮನವಿ ಮಾಡಲಾಗಿತ್ತು. ಮತ್ತೊಮ್ಮೆ ಒಕ್ಕೂಟದ ಅಧ್ಯಕ್ಷರ ಜೊತೆಗೂಡಿ ಸಚಿವರನ್ನು ಭೇಟಿ ಮಾಡಿ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಡಲಾಗುವುದು ಎಂದರು‌.

ಕಳೆದ ವರ್ಷಕ್ಕಿಂತ ಈ ವರ್ಷ 70 ಸಾವಿರ ಲೀಟರ್ ಹಾಲು ಉತ್ಪಾದನೆ ಹೆಚ್ಚಾಗಿದೆ. 4 ಲಕ್ಷ ಲೀಟರ್ ವರೆಗೆ ಹಾಲು ಉತ್ಪಾದನೆ ಆಗುತ್ತಿದೆ. ಇದು 6 ಲಕ್ಷ ಲೀಟರ್ ಗೆ ತಲುಪಬೇಕು. ಆಗ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ಇನ್ನಷ್ಟು ಬಲಾಢ್ಯವಾಗಬೇಕು. ಸರಕಾರದಿಂದ ಹೆಚ್ಚಿನ ಅನುದಾನ ಕೂಡ ಸಿಗುತ್ತದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ವಿಠಲ ಶೆಟ್ಟಿ ಶೇಡಿಕೊಡ್ಲು ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಜಗದೀಶ ಕಾರಂತ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಉಪಾಧ್ಯಕ್ಷ ಉದಯ್ ಕೋಟ್ಯಾನ್, ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ, ಸುಚರಿತ ಶೆಟ್ಟಿ, ಮಂಜಯ್ಯ ಶೆಟ್ಟಿ, ಪ್ರಕಾಶ್ ಚಂದ್ರ ಶೆಟ್ಟಿ, ಸುಧಾಕರ್ ಶೆಟ್ಟಿ, ಹದ್ದೂರು ಮಮತಾ ಶೆಟ್ಟಿ, ಪ್ರಾಥಮಿಕ ಹಾಲು ಉತ್ಪಾದಕರ ನೌಕರರ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಸುಲೇಖಾ ಶೆಟ್ಟಿ ಕೈಲ್ಕೆರೆ ಉಪಸ್ಥಿತರಿದ್ದರು.