ಉಡುಪಿ: ಮಾಜಿ ಸಿಎಂ ಕುಮಾರಸ್ವಾಮಿ ಮೊಸರಲ್ಲಿಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಉಡುಪಿಗೆ ಭೇಟಿ ನೀಡಿದ ಅವರು ಕುಮಾರ ಸ್ವಾಮಿ ಅವರ ‘ಪ್ರಭಾವ ಬಳಸಿ ಉಪ ಚುನಾವಣೆ ಮುಂದೂಡಲಾಗಿದೆ’ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಫೋನ್ ಕದ್ದಾಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅನುಮತಿ ಇಲ್ಲದೆ ಯಾವುದೇ ವ್ಯಕ್ತಿಯ ಖಾಸಗಿ ಮಾತುಕತೆಯ ಕದ್ದಾಲಿಕೆ ತಪ್ಪು ಎಂದು ಅವರು ಹೇಳಿದರು.
ಪೊಲೀಸರ ವೇತನ ಪರಿಷ್ಕರಣೆ ವಿಚಾರ ಖಂಡಿತವಾಗಿಯೂ ಔರಾದ್ಕರ್ ವರದಿ ಜಾರಿಯಾಗುತ್ತದೆ. ಔರಾದ್ಕರ್ ವರದಿಗೆ ಎರಡು ಹಂತದಲ್ಲಿ ಸಚಿವ ಸಂಪುಟ ಒಪ್ಪಿಗೆ ಕೊಟ್ಟಿದೆ.
ಆದ್ರೆ ಜೈಲು ಸಿಬ್ಬಂದಿ ಮತ್ತು ಫೈಯರ್ ಫೋರ್ಸ್ ಬಿಟ್ಟು ಹೋಗಿತ್ತು. ಆದರೆ ನಮ್ಮ ಕ್ಯಾಬಿನೆಟ್ ನಲ್ಲಿ ಅವಕ್ಕೂ ಒಪ್ಪಿಗೆ ಕೊಟ್ಟಿದ್ದೇವೆ ಆರ್ಥಿಕ ಇಲಾಖೆಯಿಂದ ಕೆಲವು ಸ್ಪಷ್ಟನೆ ಕೇಳಿದ್ದೇವೆ. ಇನ್ನೊಂದು ವಾರದೊಳಗೆ ಸ್ಪಷ್ಟವಾದ ಸುತ್ತೋಲೆ ಹೊರಡಿಸ್ತೇವೆ ಎಂದರು.