ಬೆಂಗಳೂರು: ನಗರದಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಹೊಸ ಪ್ಲಾನ್ ಮಾಡಿದೆ.
ಬೆಂಗಳೂರು ಟೆಕ್ಕಿಗಳಿಗೆ ಪ್ರತಿ ಬುಧವಾರದಂದು ವರ್ಕ್ ಫ್ರಂ ಹೋಂ ಮಾಡುವಂತೆ ಐಟಿ ಕಂಪನಿಗಳಿಗೆ ಪೊಲೀಸ್ ಇಲಾಖೆ ಸಲಹೆ ನೀಡಿದೆ. ನಗರದಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಹೊಸ ಪ್ಲಾನ್ ಮಾಡಿದೆ.
ಪ್ರತಿ ಬುಧವಾರ ವರ್ಕ್ ಫ್ರಂ ಹೋಂ:
ಐಟಿ ಕಂಪನಿಗಳು ಇರುವ ಪ್ರದೇಶಗಳು, ಅದರ ಸುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ವಿಪರೀತ ಆಗುತ್ತಿದೆ ಹೀಗಾಗಿ ಬುಧವಾರ ಒಂದು ದಿನ ವರ್ಕ್ ಫ್ರಂ ಹೋಂ ಮಾಡುವಂತೆ ಸೂಚನೆ ನೀಡಬೇಕೆಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಸಲಹೆ ನೀಡಿದ್ದಾರೆ.
ಪೋಲಿಸ್ ಇಲಾಖೆ ಸಲಹೆಗಳು:
- ಪೀಕ್ ಅವರ್ ಬಿಟ್ಟು ಬೆಳಗ್ಗೆ 7:30 ಅಥವಾ 8 ಗಂಟೆಗೆ ಕಂಪನಿ ಆರಂಭಿಸಬೇಕು.
- ಔಟರ್ ರಿಂಗ್ ರೋಡ್‌ನಲ್ಲಿ ಇರುವ ಕಂಪನಿಗಳ ಸಮಯ ಬದಲಾವಣೆ ಮಾಡಬೇಕು.
- ಪ್ರತಿ ಬುಧವಾರ ವರ್ಕ್ ಫ್ರಂ ಹೋಮ್‌ಗೆ ಸಲಹೆ, ಐಟಿ ಕಂಪನಿಗಳು ಬಿಎಂಟಿಸಿ ಜೊತೆ ಒಪ್ಪಂದ ಮಾಡಿಕೊಳ್ಳಿ.
- ಬಿಎಂಟಿಸಿ ಬಸ್‌ಗಳ ಮೂಲಕ ಪಿಕಪ್-ಡ್ರಾಪ್‌ಗೆ ಎಸಿ ಬಸ್ ಕೊಡೋದಕ್ಕೆ ಬಿಎಂಟಿಸಿ ಒಪ್ಪಿಗೆ ನೀಡಿದೆ.
- ಸಾರ್ವಜನಿಕರು ಸ್ವಂತ ವೆಹಿಕಲ್ ಬಿಟ್ಟು ಸಾರ್ವಜನಿಕ ಸಾರಿಗೆಯನ್ನು ಹೆಚ್ಚಾಗಿ ಬಳಸಿ.
ಸ್ವಲ್ಪ ಟ್ರಾಫಿಕ್ ನಿಯಂತ್ರಣ:
ಐಟಿ ಕಂಪನಿಗಳಲ್ಲಿ ಹೆಚ್ಚಾಗಿ ಬುಧವಾರ ವಾರದ ಮಧ್ಯದಲ್ಲಿ ಬರುವ ಕಾರಣ ಸಾಧಾರಣವಾಗಿ ಯಾರೂ ರಜೆ ತೆಗೆದುಕೊಳ್ಳುವುದಿಲ್ಲ. ಸಾಧಾರಣವಾಗಿ ದೀರ್ಘ ರಜೆ ಹಾಕುವವರು ಸೋಮವಾರ, ಮಂಗಳವಾರ ಅಥವಾ ಗುರುವಾರ, ಶುಕ್ರವಾರ ಹಾಕುತ್ತಾರೆ. ಆಗ ಶನಿವಾರ, ಭಾನುವಾರ ಸೇರಿ 4 ದಿನ ಸಿಗುತ್ತದೆ. ಒಂದು ವೇಳೆ ಬುಧವಾರ ವರ್ಕ್ ಫ್ರಂ ಕೊಟ್ಟರೆ ಮನೆಯಲ್ಲೇ ಕೆಲಸ ಮಾಡಬಹುದು. ಜೊತೆ ಊರಿಗೆ ಹೋಗಿದ್ದವರು ಅಲ್ಲಿಯೇ ಕೆಲಸ ಮಾಡಬಹುದು. ಇದರಿಂದ ಸ್ವಲ್ಪ ಟ್ರಾಫಿಕ್ ನಿಯಂತ್ರಣಕ್ಕೆ ಬರುತ್ತದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.












