ಪ್ರವಾಸೋದ್ಯಮ ಅಭಿವೃದ್ದಿಗೆ ಕಾರ್ಯಪಡೆ ರಚನೆ:ಬಸವರಾಜ ಬೊಮ್ಮಾಯಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ  ಪ್ರವಾಸೋದ್ಯಮವನ್ನೂ  ಇನ್ನೂ ಉತ್ತಮ ರೀತಿಯಲ್ಲಿ ಅಭಿವೃದ್ದಿಗೊಳಿಸುವ ಉದ್ದೇಶದಿಂದ ಪ್ರತ್ಯೇಕ ಕಾರ್ಯಪಡೆ ರಚಿಸಲಾಗುವುದು ಎಂದು   ರಾಜ್ಯ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಶುಕ್ರವಾರ ಜಿಲ್ಲಾಡಳಿತ ಉಡುಪಿ, ಪ್ರವಾಸೋದ್ಯಮ ಇಲಾಖೆ, ಮಲ್ಪೆಅಭಿವೃದ್ಧಿ ಸಮಿತಿ ಮತ್ತು ಕರಾವಳಿ ಪ್ರವಾಸೋದ್ಯಮ ಸಂಘಟನೆ(ಂಅಖಿ), ಉಡುಪಿ ಜಿಲ್ಲೆಇವರ ಸಹಯೋಗದಲ್ಲಿಪ್ರವಾಸೋದ್ಯಮ ಹಾಗೂ ಉದ್ಯೋಗ ಸರ್ವರಿಗೂಉಜ್ವಲ ಭವಿಷ್ಯ ಎಂಬ ಧ್ಯೇಯದೊಂದಿಗೆಜಿಲ್ಲಾಧಿಕಾರಿಕಚೇರಿ ಸಂಕೀರ್ಣದಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ವಿಫುಲ ಅವಕಾಶಗಳಿದ್ದು, ಇದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರವಾಸೋದ್ಯಮ ನೀತಿಯನ್ವಯ, ಸಿಆರ್ಜೆಡ್ ನಿಯಮಗಳನ್ವಯ , ಪ್ರವಾಸೋದ್ಯಮ ಅಭಿವೃಧ್ದಿಪಡಿಸಲು , ಪ್ರವಾಸೋಧ್ಯಮ ಕ್ಷೇತ್ರದ ತಜ್ಞರು, ಉದ್ಯಮಿಗಳು, ಪ್ರವಾಸಿ ಹೂಡಿಕೆದಾರರು, ಜನಪ್ರತಿನಿಧಿಗಳು ಮತ್ತು ಅಧಿಕರಿಗಳನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗುವುದು  ಎಂದರು.

 

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್ ,  ಪ್ರವಾಸಕ್ಕೆಂದು ಬರುವ ಪ್ರವಾಸಿಗರ ಕುರಿತು ಮಾತ್ರ ಗಮನ ನೀಡದೇ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಠಿ ಮತ್ತು ಸ್ಥಳಿಯರನ್ನು ತೊಡಗಿಸಿಕೊಳ್ಳುವ ಕುರಿತು ಚಿಂತಿಸಬೇಕು. ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನುಎತ್ತರಕ್ಕೆ ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.

ಉಡುಪಿ ಶಾಸಕ ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಬೈಂದೂರು ಶಾಸಕ ಬಿ ಎಂ.ಸುಕುಮಾರ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷೆ ನೀತಾಗುರುರಾಜ್ ಪೂಜಾರಿ, ಎಸ್ಪಿ ನಿಶಾ ಜೇಮ್ಸ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಜಿಲ್ಲಾ ಪಂಚಾಯತ್ ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ ಸುವರ್ಣ, ಸುರೇಶ್ ಬಟವಾಡೆ, ಎಂ.ಆರ್.ಜಿ ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ  ಮತ್ತಿತರರು ಉಪಸ್ಥಿತರಿದ್ದರು.

ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಚಂದ್ರಶೇಖರ್ ನಾಯ್ಕ್ ಸ್ವಾಗತಿಸಿದರು. ಪೌರಾಯುಕ್ತ ಆನಂದ್ ಚಿ ಕಲ್ಲೋಳಿಕರ್ ವಂದಿಸಿದರು.

ಇದೇ ಸಂದರ್ಭದಲ್ಲಿ ಸಚಿವರು ಪ್ರವಾಸಿ ಟ್ಯಾಕ್ಸಿಗಳನ್ನು ವಿತರಿಸಿದರು.