ಉಡುಪಿ ಶ್ರೀಕೃಷ್ಣಮಠಕ್ಕೆ ನಟ ವಿಜಯರಾಘವೇಂದ್ರ ಭೇಟಿ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಅವರು ಇಂದು ಭೇಟಿ ನೀಡಿ ದೇವರ ದರ್ಶನ ಮಾಡಿದರು.ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಭೇಟಿಯಾಗಿ ಕೋಟಿಗೀತಾಲೇಖನಯಜ್ಞ ದೀಕ್ಷೆ ಸ್ವೀಕರಿಸಿ ಕಿರಿಯ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.