ರಾಜ್ಯದ ಕರಾವಳಿ ಮತ್ತು ಮಲೆನಾಡಲ್ಲಿ ಭಾರೀ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಬಿಡುವುಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಈ ವಾರ ಪೂರ್ತಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಮಲೆನಾಡಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು (ಆ.4) ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆಯಿಂದ (ಜು.5) ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಆ.7 ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.