ಮಣಿಪಾಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಚಾಲಕ ಸ್ಥಳದಿಂದ ಪರಾರಿ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಪೊಲೀಸ್ ಠಾಣೆಯ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.

ಬೆಂಗಳೂರು ನೋಂದಣಿಯ ಕಾರು ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂತಿಗಳು ರಸ್ತೆಗೆ ಬಿದ್ದಿದ್ದು, ಮಣಿಪಾಲದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದೆ.