ಉಡುಪಿ: ಬ್ರಹ್ಮಾವರ ತಾಲೂಕು ಪೆಜಮಂಗೂರು ಗ್ರಾಮದ ಕೊಕ್ಕರ್ಣೆ ಕೆಳಪೇಟೆಯ ಬಾಡಿಗೆ ಮನೆಯೊಂದರಲ್ಲಿ
ವಾಸವಿದ್ದ ಸುರೇಂದ್ರ ನಾಯ್ಕ (36) ಎಂಬ ವ್ಯಕ್ತಿಯು ಜೂನ್ 28 ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 6 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಮರಾಠಿ ಭಾಷೆ
ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.












