ಹಿರಿಯಡ್ಕ: ಅನಾರೋಗ್ಯ ಹಾಗೂ ಕುಡಿತದ ಚಿಂತೆಯಿಂದ ಜು.30ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪೆರ್ಡೂರಿನ ರಾಮ(59) ಎಂಬವರು ಆ.3ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಉಪ್ಪುಂದ ಗ್ರಾಮದ ಲಕ್ಷ್ಮಣ(32) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.3ರಂದು ಬೆಳಗ್ಗೆ ಮನೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಮದ್ಯಪಾನ ಸೇವನೆ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಪ್ಪಳ ಜಿಲ್ಲೆಯ ಸತೀಶ್(19) ಎಂಬವರು ಆ.3ರಂದು ಮಧ್ಯಾಹ್ನ ಮನೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮಾಸೆಬೈಲು: ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಹೊಸಂಗಡಿ ಗ್ರಾಮದ ಹೆಗ್ಗೋಡ್ಲು ಕಂಬಳಗದ್ದೆ ಮನೆ ನಿವಾಸಿ ಚಂದ್ರಶೇಖರ(60) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.3ರಂದು ಸಂಜೆ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












