ಶಿರೂರು ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿಯ ಪ್ರಥಮ ಸಭೆ

ಉಡುಪಿ: ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿಯ ಪ್ರಥಮ ಪರ್ಯಾಯ ಮಹೋತ್ಸವದ ಅಂಗವಾಗಿ ಸ್ವಾಗತ ಸಮಿತಿಯ ಪದಾಧಿಕಾರಿಗಳ ಪ್ರಥಮ ಸಭೆ ಕೃಷ್ಣಾಪುರ ಮಠದ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಉಡುಪಿಯ ಶಾಸಕ ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷ ಯಶಪಾಲ್ ಸುವರ್ಣ ಮಾತನಾಡಿ, ಪ್ರತಿ ಬಾರಿಯಂತೆ ಈ ಬಾರಿಯು ಪರ್ಯಾಯ ಮಹೋತ್ಸವವನ್ನು ನಾಡಹಬ್ಬದ ರೀತಿಯಲ್ಲಿ ಆಚರಿಸಲಾಗುವುದು. ಇದು ತುಳುವರ ಕಾರ್ಯಕ್ರಮ. ಇದನ್ನು ಯಶಸ್ವಿಗೊಳಿಸಲು ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.

ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ, ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ, ಸಲಹೆಗಾರ ಬಾಲಾಜಿ ರಾಘವೇಂದ್ರ ಆಚಾರ್ಯ ಮಾತನಾಡಿದರು.ಈ ಸಂದರ್ಭದಲ್ಲಿ ಸಮಿತಿಯ ಸಂಚಾಲಕರುಗಳಾಗಿ ರಮೇಶ್ ಕಾಂಚನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಶ್ರೀಧರ ಭಟ್ ಉಚ್ಚಿಲ ಅವರನ್ನು ಘೋಷಿಸಿ ಪ್ರಮಾಣಪತ್ರ ಪ್ರದಾನ ಮಾಡಲಾಯಿತು.

ಮಠದ ದಿವಾನ ಉದಯ ಕುಮಾರ್ ಸರಳತ್ತಾಯರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅಶ್ವತ್ ಭಾರಧ್ವಾಜ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.