ಕಾರ್ಕಳ: 4 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು; ಮೂವರು ಆರೋಪಿಗಳ ಬಂಧನ

ಉಡುಪಿ: ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಎಂಬವರ ತೋಟದಲ್ಲಿ ಬೆಳೆಸಿದ್ದ 4 ಲಕ್ಷ ಮೌಲ್ಯದ ಒಟ್ಟು 9 ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ‌.

ಮೂಡುಬೆಳ್ಳೆಯ ಗಣೇಶ್ (44), ಎಣ್ಣೆಹೊಳೆಯ ಸಂತೋಷ(35) ಹಾಗೂ ಬಂಟ್ವಾಳ ತಾಲೂಕು ಬಾಳೆಪುಣಿಯ ಮೊಯ್ದೀನ್ ಯಾನೆ ಮೊಯಿದು ಕುಂಞ (60) ಬಂಧಿತ ಆರೋಪಿಗಳು. ಬಂಧಿತರಿಂದ ಕಳವು ಮಾಡಲಾದ ಶ್ರೀಗಂಧದ ತುಂಡುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.