ರಾಜ್ಯ ಸರಕಾರ ಕಾರ್ಮಿಕರ ಪರ ‌ಕೆಲಸ ಮಾಡಬೇಕು: ಯು.ಟಿ‌. ಖಾದರ್

ಮಂಗಳೂರು: ರಾಜ್ಯಸರ್ಕಾರ ಯಾವುದೇ ಕಾರಣಕ್ಕೂ ಕಾರ್ಮಿಕ ಪರವಾಗಿಯೇ ಕೆಲಸ ಮಾಡಬೇಕು. ಕಾರ್ಮಿಕರ ಸವಲತ್ತುಗಳನ್ನು ಸ್ಥಗಿತಗೊಳಿಸಬಾರೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.
ಈ ಕುರಿತು ಮಂಗಳೂರಲ್ಲಿ ಮಾತನಾಡಿದ ಅವರು, ಕಾರ್ಮಿಕರ ಪರವಾಗಿರುವ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು. ಈ ಸರ್ಕಾರ ಕಾರ್ಮಿಕರ ಪರವಾಗಿಲ್ಲ, ಬಂಡವಾಳಶಾಹಿಗಳ ಪರವಾಗಿದೆ ಎಂದು ಆರೋಪಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಸದ ನಳಿನ್ ಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಭೆ ನಡೆಯಬೇಕು. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಚುರುಕು ಮುಟ್ಟಿಸುವ ಕೆಲಸವಾಗಬೇಕಾಗಿದೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದ ಕುರಿತಂತೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ. ಈಗಾಗಲೇ ತಳಮಟ್ಟದ ಕಾರ್ಯಕರ್ತರಿಂದಲೇ ಅಭಿಪ್ರಾಯಗಳನ್ನು ಸಂಗ್ರಹ ಮಾಡುತ್ತಿದೆ. ಪಕ್ಷದ ತೀರ್ಮಾನಕ್ಕೆ ನಾವು ಬದ್ಧರಾಗುತ್ತೇವೆ ಎಂದರು.