ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಉಡುಪಿ ಹಾಗೂ ಬ್ರಹ್ಮಾವರ ಕಚೇರಿ ವತಿಯಿಂದ ಉಡುಪಿ ತಾಲೂಕು ಮಟ್ಟದ ಕಲಾಶ್ರೀ ಶಿಬಿರವನ್ನು ಅಕ್ಟೋಬರ್ 11 ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಏರ್ಪಡಿಸಲಾಗಿದೆ.
ಉಡುಪಿ ತಾಲೂಕಿನ ವಿವಿಧ ಶಾಲೆಗಳ 9 ರಿಂದ 16 ವರ್ಷದೊಳಗಿನ ಮಕ್ಕಳು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ, ಸೃಜನಾತ್ಮಕ ಪ್ರದರ್ಶನ ಕಲೆ, ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸ್ಪರ್ಧೆಗಳ ಕ್ಷೇತ್ರಗಳಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಉಡುಪಿ ದೂ.ಸಂ. 0820-2524055 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.