ಬ್ರಹ್ಮಾವರ: ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಬ್ರಹ್ಮಾವರ: ಬ್ರಹ್ಮಾವರ ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆ ಭರ್ಜರಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಐವನ್ ದೋನಾಥ್ ಸುವಾರಿಸ್ ಅವರು ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸಿ, ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಭೂ ಸೇನಾ ಯೋಧ ಹವಾಲ್ದಾರ್ ಜಯರಾಮ್ ಶೆಟ್ಟಿ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಅವರು ವಿದ್ಯಾರ್ಥಿಗಳಿಗೆ ಸೇನೆಯ ಮಹತ್ವವನ್ನು ವಿವರಿಸಿ, ಸೇನೆಗೆ ಸೇರ್ಪಡೆಯಾಗಲು ಅಗತ್ಯವಾದ ಮಾಹಿತಿಯನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಕನ್ನಡ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯ ವಿಷ್ಣುದಾಸ್ ಉಪಾಧ್ಯ, ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮದ ಮುಖ್ಯೋಪಾಧ್ಯಾಯ ಶ್ರೀಮತಿ ವತ್ಸಲ ಶೆಟ್ಟಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.