RSS ಭಾರತದ ತಾಲಿಬಾನ್‌ ಇದ್ದಂತೆ; ಬಿ.ಕೆ.ಹರಿಪ್ರಸಾದ್‌ ಕಿಡಿ

ನವದೆಹಲಿ: ಆರ್‌ಎಸ್‌ಎಸ್‌ ಭಾರತದ ತಾಲಿಬಾನ್‌ ಇದ್ದಂತೆ ಎಂದು ವಿಧಾನ ಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ್‌ ಕಿಡಿಕಾರಿದ್ದಾರೆ.

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್ ಹೊಗಳಿದ್ದಕ್ಕಾಗಿ ಶನಿವಾರ ಹರಿ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಆರ್‌ಎಸ್‌ಎಸ್ ನವರು ದೇಶದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ನಾನು ಆರ್‌ಎಸ್‌ಎಸ್ ಅನ್ನು ತಾಲಿಬಾನ್‌ಗೆ ಮಾತ್ರ ಹೋಲಿಸುತ್ತೇನೆ, ಅವರು ಭಾರತೀಯ ತಾಲಿಬಾನ್‌ಗಳು ಮತ್ತು ಪ್ರಧಾನಿ ಅವರನ್ನು ಕೆಂಪು ಕೋಟೆಯಿಂದ ಶ್ಲಾಘಿಸುತ್ತಿದ್ದಾರೆ” ಎಂದು ಹರಿಪ್ರಸಾದ್ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಯಾವುದೇ ‘ಸಂಘಿ’ ಇದ್ದರಾ? ನಿನ್ನೆ ಕೆಂಪು ಕೋಟೆಯಿಂದ ಇವರ ಬಗ್ಗೆ ವ್ಯಕ್ತಿಯೊಬ್ಬರು ಮಾತನಾಡಿದ್ದಾರೆ. ಆರ್‌ಎಸ್‌ಎಸ್ ನೋಂದಾಯಿತ ಸಂಘಟನೆಯಲ್ಲ ಎಂಬುದು ನಾಚಿಕೆಗೇಡಿನ ಸಂಗತಿ. ಅವರಿಗೆ ಎಲ್ಲಿಂದ ಹಣ ಬರುತ್ತದೆ ಎಂದು ನಮಗೆ ತಿಳಿದಿಲ್ಲ. ದೇಶದಲ್ಲಿ ಕೆಲಸ ಮಾಡಲು ಬಯಸುವ ಯಾವುದೇ ಎನ್‌ಜಿಒ ಸಂವಿಧಾನದ ಪ್ರಕಾರ ನೋಂದಾಯಿಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ್‌ ಹೇಳಿದ್ದಾರೆ.

ಮುಹಮ್ಮದ್ ಅಲಿ ಜಿನ್ನಾ, ಕಾಂಗ್ರೆಸ್ ಮತ್ತು ಆಗಿನ ವೈಸ್‌ರಾಯ್ ಲಾರ್ಡ್ ಮೌಂಟ್‌ಬ್ಯಾಟನ್ ಅವರು ದೇಶ ವಿಭಜನೆಗೆ ಕಾರಣ ಎಂದು ಎನ್‌ಸಿಇಆರ್‌ಟಿ ಪಠ್ಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಇತಿಹಾಸವನ್ನು ತಿರುಚುವ ಮಾಸ್ಟರ್ಸ್ ಎಂದು ತಿರುಗೇಟು ನೀಡಿದರು.