ಉಡುಪಿ: ಧರ್ಮಸ್ಥಳ ವಿರುದ್ಧ ಷಡ್ಯಂತ್ರ -ವಿಶ್ವ ಹಿಂದೂ ಪರಿಷತ್ನಿಂದ ಅನಂತೇಶ್ವರ ದೇವಸ್ಥಾನದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಅಪಪ್ರಚಾರ ದೂರವಾಗಿ ಶ್ರೀ ಮಂಜುನಾಥನ ಭಕ್ತರಿಗೆ ಶಾಂತಿ- ನೆಮ್ಮದಿ ಲಭಿಸಲಿ, ಭಕ್ತಿ ಹೆಚ್ಚಾಗಲಿ ಎನ್ನುವ ಸಂಕಲ್ಪದೊಂದಿಗೆ ವಿಶ್ವ ಹಿಂದೂ ಪರಿಷತ್ ವತಿಯಿಂದ ಉಡುಪಿಯ ಅನಂತೇಶ್ವರ ದೇವಸ್ಥಾನದಲ್ಲಿ ‘ಓಂ ನಮಃ ಶಿವಾಯ’ ಶಿವ ಪಂಚಾಕ್ಷರಿ ಮಂತ್ರ ಪಠಣ ನಡೆಯಿತು.

ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ ಶಿವ ಪಂಚಾಕ್ಷರಿ ಪಠಣ ಮಾಡಲಾಯಿತು.ಈ ಸಂದರ್ಭಮಾತನಾಡಿದ ವಿಶ್ವ ಹಿಂದೂ ಪರಿಷತ್ ಮುಖಂಡ ಸುನಿಲ್ ಕೆ.ಆರ್, ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಅನೇಕರು ಈ ಅಪಪ್ರಚಾರದಲ್ಲಿ ಸೇರಿಕೊಂಡಿದ್ದಾರೆ. ಕೋಟ್ಯಂತರ ಹಿಂದೂಗಳ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಮಾಡುತ್ತಿರುವವರಿಗೆ ತಕ್ಕ ಶಿಕ್ಷೆ ಆಗಬೇಕು.ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಎರಡು ದಿನ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.