ಉಡುಪಿ: ಪತ್ರಕರ್ತ ಆಸ್ಟ್ರೋ ಮೋಹನ್ ರವರಿಗೆ ಕಸಾಪ ಗೌರವ

ಉಡುಪಿ: ಅಮೆರಿಕದ ಇಮೇಜ್ ಕಾಲಿಂಗ್ ಸೊಸೈಟಿ ಇಂಟರ್ನ್ಯಾಷನಲ್ ಇದರ ವತಿಯಿಂದ ಗೌರವ ಫೆಲೋಶಿಪ್ ಪ್ರಶಸ್ತಿಗೆ ಪಾತ್ರರಾದ ಹಿರಿಯ ಛಾಯಾಚಿತ್ರ ಪತ್ರಕರ್ತ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್ ಅವರನ್ನು ಕಸಾಪ ಉಡುಪಿ ತಾಲೂಕು ಘಟಕದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.

ಪೂರ್ಣಪ್ರಜ್ಞ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ. ಸದಾಶಿವ ರಾವ್ ಸನ್ಮಾನ ನೆರೆವೇರಿಸಿ ಮಾತನಾಡಿ ಆಸ್ಟ್ರೋ ಮೋಹನ್ ರವರು ಕಳೆದ ಹಲವಾರು ವರ್ಷಗಳಿಂದ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಯನ್ನು ಗಳಿಸಿ ನಮ್ಮ ಉಡುಪಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇದು ನಾವೆಲ್ಲರೂ ಹೆಮ್ಮೆಪಡುವ ವಿಚಾರ ಎಂದರು.

ಕೆಎಂಸಿ ಮಣಿಪಾಲದ ಮೂಳೆ ರೋಗ ತಜ್ಞ ಡಾ. ಕಿರಣ ಆಚಾರ್ಯ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ ಎಚ್ ಪಿ, ಕಸಾಪ ಉಡುಪಿ ಜಿಲ್ಲಾ ಮಹಿಳಾ ಪ್ರತಿನಿಧಿ ಪೂಣಿ೯ಮಾ ಜನಾದ೯ನ್, ಗೌರವ ಕಾರ್ಯದರ್ಶಿಗಳಾದ ಜನಾದ೯ನ್ ಕೊಡವೂರು, ರಂಜಿನಿ ವಸಂತ, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕವಾ೯ಲು, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್, ಶ್ರೀನಿವಾಸ್, ದೀಪಾ ಕಕಿ೯, ವಿದ್ಯಾ ಶಾಮಸುಂದರ, ಪ್ರವೀಣಾ ಮೋಹನ್, ಪ್ರತಿಮಾ ಕಿರಣ್, ಪ್ರಸನ್ನ ಶ್ರೀನಿವಾಸ್ ಉಪಸ್ಥಿತರಿದ್ದರು.