ಉಡುಪಿ: ಉಡುಪಿ ಬ್ರಹ್ಮಕುಮಾರೀಸ್ ಇವರಿಂದ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ, ಕುಂದಾಪುರ ತಾಲೂಕು
ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬ್ರಹ್ಮಗಿರಿ ರೆಡ್ಕ್ರಾಸ್ ಭವನದಲ್ಲಿ ಆಗಸ್ಟ್ 24 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಕುಂದಾಪುರ ರೆಡ್ಕ್ರಾಸ್ ಸಭಾಪತಿ ಎಸ್. ಜಯಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬ್ರಹ್ಮ ಕುಮಾರೀಸ್ ಉಡುಪಿ ಸಂಚಾಲಕಿ ಬಿ.ಕೆ ಸುಮಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.












