ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ.ಬಿ.ಆರ್ ಅಂಬೇಡ್ಕರ್ ರವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 2
ರಂದು ನಡೆಯುವ ಪರಿವರ್ತನಾ ದಿನಕ್ಕೆ ಭೇಟಿ ನೀಡಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://swd.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 9 ಕೊನೆಯ ದಿನ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಯೊಂದಿಗೆ ಎರಡು ದಿನಗಳ ಒಳಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.












