ಉಡುಪಿ:ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ : ಅರ್ಜಿ ಆಹ್ವಾನ

ಉಡುಪಿ:ಜಿಲ್ಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ / ಡಿಪ್ಲೋಮಾ
ಮತ್ತು ವೃತ್ತಿಪರ ಪದವಿಯವರೆಗೆ ರಾಜ್ಯದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ
ಮಾಡುತ್ತಿರುವ ರಾಜ್ಯದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ ಡಿಪ್ಲೋಮಾ ವರೆಗೆ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಕ್ಟೋಬರ್ 15 ರ ಒಳಗಾಗಿ ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ನವೆಂಬರ್ 15 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ,
ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.