ಚೆನ್ನೈ: ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನಕ್ಕೆ ನಿವೃತ್ತಿ ಹೇಳಿದ್ದಾರೆ.
221 ಪಂದ್ಯಗಳನ್ನು ಆಡಿ 187 ವಿಕೆಟ್‌ಗಳನ್ನು ಪಡೆದಿರುವ ಅಶ್ವಿನ್ ಸಾಮಾಜಿಕ ಜಾಲತಾಣದಲ್ಲಿ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಪ್ರತಿ ಅಂತ್ಯವು ಹೊಸ ಆರಂಭವನ್ನು ಹೊಂದಿರುತ್ತದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ ಸಮಯ ಇಂದು ಕೊನೆಗೊಳ್ಳುತ್ತದೆ. ಎಲ್ಲಾ ಅದ್ಭುತ ನೆನಪುಗಳು ಮತ್ತು ಸಂಬಂಧಗಳನ್ನು ನೀಡಿದ ಎಲ್ಲಾ ಫ್ರಾಂಚೈಸಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಮುಖ್ಯವಾಗಿ ಐಪಿಎಲ್ ಮತ್ತು ಬಿಸಿಸಿಐಗೆ ಕೃತಜ್ಞತೆಗಳು ಎಂದು ಹೇಳಿದ್ದರು.












