ಉಡುಪಿ: ಯುವವಾಹಿನಿ ಉಡುಪಿ ಘಟಕದ ವತಿಯಿಂದ ಕೊಡಲ್ಪಡುವ ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿಗೆ ಹಿರಿಯ ಲೇಖಕಿ ಯಶವಂತಿ ಎಸ್. ಸುವರ್ಣ ನಕ್ರೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಗೆ ಚಿತ್ರಕಲಾವಿದ ಪಿ.ಎನ್. ಆಚಾರ್ಯ ಪುತ್ತೂರು ಅವರು ಆಯ್ಕೆಯಾಗಿದ್ದು, ಅ. 13ರಂದು ಸಂಜೆ 5 ಗಂಟೆಗೆ ಬಲಾಯಿಪಾದೆ ನಾಗಪ್ಪ ಕಾಂಪ್ಲೆಕ್ಸ್‌ನಲ್ಲಿರುವ ಯುವವಾಹಿನಿ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎರಡು ಪ್ರಶಸ್ತಿ ತಲಾ 10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. 2010ರಿಂದ ಈವರೆಗೆ ಪ್ರತಿವರ್ಷ ಕೆಮ್ಮಲಜೆ ಜಾನಪದ ಪ್ರಕಾಶನದಿಂದ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು, ಈ ವರ್ಷದಿಂದ ಯುವವಾಹಿನಿ ಉಡುಪಿ ಘಟಕದ ವತಿಯಿಂದ ನೀಡಲಾಗುವುದು ಎಂದರು.
ತುಳುಕೂಟದ ಗೌರವಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಪ್ರಶಸ್ತಿ ಪ್ರದಾನ ಮಾಡುವರು. ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ದುಗ್ಗಪ್ಪ ಕಜೆಕಾರು ಅಭಿನಂದನಾ ಭಾಷಣ ಮಾಡುವರು. ಯುವವಾಹಿನಿ ಅಧ್ಯಕ್ಷ ಬಿ.ಎಸ್. ನಾರಾಯಣ ಅಧ್ಯಕ್ಷತೆ ವಹಿಸುವರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದರು.
ಗೋಷ್ಠಿಯಲ್ಲಿ ಯುವವಾಹಿನಿ ಅಧ್ಯಕ್ಷ ಬಿ.ಎಸ್. ನಾರಾಯಣ, ಸಮಿತಿಯ ಮಾಜಿ ಅಧ್ಯಕ್ಷರಾದ ರಘುನಾಥ್ ಮಾಬಿಯಾನ್, ಭಾಸ್ಕರ ಸುವರ್ಣ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಇದ್ದರು.