ಮಂಗಳೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇವರು 2024- 2025 ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆಗೈದು ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಸಂಘಗಳಿಗೆ ನೀಡುತ್ತಿರುವ “ಅ” ವರ್ಗದ ಸಹಕಾರಿ ಸಂಘಗಳಲ್ಲಿ ‘ಜಿಲ್ಲಾ ಬ್ಯಾಂಕಿನ ತೃತೀಯ ಪ್ರಶಸ್ತಿಗೆ ‘ ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘವು ಪ್ರಸ್ತುತ ಸಾಲಿನಲ್ಲಿ ಆಯ್ಕೆಯಾಗಿರುತ್ತದೆ.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಆಗಸ್ಟ್ 30ರಂದು ಜರುಗಿದ ಮಹಾಸಭೆಯಲ್ಲಿ ಅಧ್ಯಕ್ಷರಾದ ಡಾ| ಎಂ.ಎನ್.ರಾಜೇಂದ್ರ ಕುಮಾರ್ ರವರು ಸಂಘವು ಅಭಿವೃದ್ಧಿಯಲ್ಲಿ ಉತ್ತುಂಗಕ್ಕೇರಲಿ ಎಂದು ಪ್ರಶಂಸಿಸಿ ಸಂಘದ ಅಧ್ಯಕ್ಷರಾದ ಎನ್.ರಮೇಶ ಶೆಟ್ಟಿ ರವರನ್ನು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಾದ ಸಂದೀಪ ಶೆಟ್ಟಿರವರನ್ನು ಸನ್ಮಾನಿಸಿ, ಬಹುಮಾನದೊಂದಿಗೆ ಪ್ರಶಸ್ತಿ ಪತ್ರ ಗೌರವ ಸ್ಮರಣಿಕೆ ನೀಡಿ ಗೌರವಿಸಿದರು.

ಸನ್ಮಾನ ಸಮಾರಂಭದ ವೇದಿಕೆಯಲ್ಲಿ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಅಶೋಕ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ರಾಜೇಶ್ ರಾವ್ ಪಾಂಗಾಳ, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀಮತಿ ಲಾವಣ್ಯ ಕೆ.ಆರ್ ಉಪಸ್ಥಿತರಿದ್ದರು.














