ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ನಟ (Darshan) ದರ್ಶನ್ ಜೈಲಿನ ನರಕಯಾತನೆ ತಾಳಲಾರದೆ ಜಡ್ಜ್ ಎದುರು ದರ್ಶನ್ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.
ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್ನಿಂದಲೇ ಈ ಆದೇಶ ನೀಡಬೇಕು’ ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ಜಡ್ಜ್ ‘ಹಾಗೆಲ್ಲಾ ನೀವು ಕೇಳುವಂತಿಲ್ಲ’ ಜಡ್ಜ್ ದರ್ಶನ್ಗೆ ಕಿವಿ ಮಾತು ಹೇಳಿದ್ದಾರೆ.
‘ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ. ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ’ ಎಂದು ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ್ದಾರೆ.
ವಿವರ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಹಾಗೂ ಪವಿತ್ರ ಗೌಡ ಗ್ಯಾಂಗ್ ಕಳೆದ ವರ್ಷ ಅರೆಸ್ಟ್ ಆಗಿದ್ದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಸುಪ್ರೀಂಕೋರ್ಟ್ ದರ್ಶನ್ ಅವರ ಜಾಮೀನನ್ನು ರದ್ದು ಮಾಡಿ, ಯಾವುದೇ ವಿಶೇಷ ಸವಲತ್ತು ಸಿಗಬಾರದು ಎಂದು ಎಚ್ಚರಿಸಿತ್ತು.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ. ಹೆಚ್ಚುವರಿ ದಿಂಬು ಹಾಗೂ ಬೇಡ್ಶೀಟ್ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ವೇಳೆ ವಿಡಿಯೋ ಕಾಲ್ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅಲ್ಲಿನ ಕಠಿಣ ನಿಯಮಗಳಿಂದ ನರಕಯಾತನೆ ಉಂಟಾಗುತ್ತಿರುವುದರಿಂದ ದರ್ಶನ್ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್ನಿಂದಲೇ ಈ ಆದೇಶ ನೀಡಬೇಕು ಎಂದು ಜಡ್ಜ್ ಮುಂದೆ ಹೇಳಿದ್ದಾರೆ ಎನ್ನಲಾಗಿದೆ.















