ಸೌಜನ್ಯಾ ಪ್ರಕರಣ: ಮರುತನಿಖೆ ಒತ್ತಾಯಿಸಿ ದ.ಕ. ಎಸ್‌ಪಿಗೆ ಸ್ನೇಹಮಯಿ ಕೃಷ್ಣ ದೂರು

ಮಂಗಳೂರು: ‘ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅವರಿಗೆ ದೂರು ನೀಡಿದ್ದಾರೆ.

ಈ ದೂರಿನಲ್ಲಿ ಕೆಲ ವ್ಯಕ್ತಿಗಳ ಹೆಸರನ್ನು ಅವರು ಉಲ್ಲೇಖಿಸಿದ್ದಾರೆ. ಲೈಂಗಿಕ ದೌರ್ಜನ್ಯ ನಡೆಸಿ ಸೌಜನ್ಯಾಳನ್ನು ಕೊಲೆ ಮಾಡಿರುವ ನೈಜ ಆರೋಪಿಗೆ ಶಿಕ್ಷೆಆಗಬೇಕು. ಆ ಕಾರಣಕ್ಕಾಗಿ ದೂರಿನಲ್ಲಿ ಹೆಸರಿಸಿರುವ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿದ್ದಾರೆ.