ಉಡುಪಿ: ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ ತೂಕದ ಗಾಂಜಾ ವಶಪಡಿಸಿಕೊಂಡ ಪೊಲೀಸರು; ಇಬ್ಬರ ಬಂಧನ

ಉಡುಪಿ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಮೌಲ್ಯದ ಗಾಂಜಾವನ್ನು ಉಡುಪಿ ಸೆನ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಉಡುಪಿ ಕಿನ್ನಿಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಲಾರಿಯನ್ನು ತಡೆದು 65 ಕೆ.ಜಿ‌‌ ತೂಕದ ಗಾಂಜಾವನ್ನು ವಶಕ್ಕೆ ಪಡೆದುಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.