ಉಡುಪಿ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯ ಮಂಚಿಕೆರೆ ಎಂಬಲ್ಲಿ ನಡೆದಿದೆ.
ಮಂಚಿಕೆರೆಯ ಪ್ರವೀಣ್ ಸಪಳಿಗ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ದೋಚಿದ್ದಾರೆ. ಪ್ರವೀಣ್ ಸಪಳಿಗ ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದು, ಬೆಳಿಗ್ಗೆ 8 ಗಂಟೆಗೆ ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಸಂಜೆ 5 ಗಂಟೆಗೆ ಮನೆಗೆ ಬಂದು ನೋಡುವಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮಣಿಪಾಲ ಠಾಣಾ ಪೊಲೀಸರು ಆಗಮಿಸಿದ್ದು, ತನಿಖೆ ನಡೆಯುತ್ತಿದೆ.












