ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ಜಿಲ್ಲಾ ಮಟ್ಟದ ಟೆನ್ನಿಕೋಯಿಟ್ ಪಂದ್ಯಾಟದಲ್ಲಿ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ.

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಸರಸ್ವತಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ವಿದ್ಯಾರ್ಥಿನಿಯರಾದ ಅಪೂರ್ವ ಮತ್ತು ರಿಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ
ಅಭಿನಂದಿಸಿದ್ದಾರೆ.