ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಲೈನ್ ಫಾಲೋವರ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ
ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ
ವಿದ್ಯಾರ್ಥಿಗಳಾದ ಕೌಶಿಕ್ ಎ, ಮನ್ವಿತ್ ಎಂ. ಪಿ. ಹಾಗೂ ಕೆ. ಎಸ್. ರವೀಶ್ ಪದ್ಮಶಾಲಿ ಇವರು ದಿನಾಂಕ 10 ಸೆಪ್ಟೆಂಬರ್ 2025 ರಂದು ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ನಡೆದ ಪ್ರಸಿದ್ಧ
“ರೋಬೋರೇಜ್ 2025” ಸ್ಪರ್ಧೆಯಲ್ಲಿ ಲೈನ್ ಫಾಲೋವರ್ ವಿಭಾಗದಲ್ಲಿ 20,000 ನಗದು ಬಹುಮಾನದೊಂದಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಯು ಅವರ ನವೀನ ಚಿಂತನೆ ಮತ್ತು ತಾಂತ್ರಿಕ ಶ್ರೇಷ್ಠತೆಯ ಪ್ರತೀಕವಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ವ್ಯಕ್ತಪಡಿಸಿರುತ್ತಾರೆ. ಈ ರೀತಿಯ ಯಶಸ್ಸು ವಿದ್ಯಾರ್ಥಿಗಳ ನಿಷ್ಠೆ, ಶ್ರಮ ಹಾಗೂ ಶಿಕ್ಷಣದ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದ್ದಾರೆ.