ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ವಿದ್ಯಾರ್ಥಿನಿಯರೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ.
ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

















