ಬೆಂಗಳೂರು: ಕರ್ನಾಟಕ ಸರ್ಕಾರವು ಜಾಗತಿಕ ಶೈಕ್ಷಣಿಕ ವಲಯದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಇಂಗ್ಲೆಂಡ್ನ ಪ್ರತಿಷ್ಠಿತ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದೊಂದಿಗೆ ಸಂಶೋಧನೆ ಮತ್ತು ಅಭಿವೃದ್ಧಿ ಉತ್ತೇಜಿಸುವ ನಿಟ್ಟಿನಲ್ಲಿ ದೀರ್ಘಾವಧಿಯ ಶೈಕ್ಷಣಿಕ ಸಹಯೋಗವನ್ನು ಘೋಷಿಸಲಾಗಿದೆ.
ಈ ಸಹಯೋಗವು ಕರ್ನಾಟಕದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವುದರೊಂದಿಗೆ, ವಿದ್ಯಾರ್ಥಿ ಹಾಗೂ ಅಧ್ಯಾಪಕರಿಗೆ ಅಂತರಾಷ್ಟ್ರೀಯ ಮಟ್ಟದ ಜ್ಞಾನ ವಿನಿಮಯ, ಸಂಶೋಧನೆ ಹಾಗೂ ಆವಿಷ್ಕಾರಕ್ಕೆ ಅವಕಾಶಗಳನ್ನು ಒದಗಿಸುವುದೇ ಪ್ರಧಾನ ಉದ್ದೇಶವಾಗಿದೆ.
ಶೈಕ್ಷಣಿಕ ಸಹಯೋಗವನ್ನು ಮುನ್ನಡೆಸಲು ಪ್ರೊ. ರಾಜೀವ್, ಪ್ರೊ. ಟೊನ್ನಿ, ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶಕರು, ಪ್ರೊ. ಸುರೇಶ್ ರೇಣುಕಪ್ಪ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.ಮತ್ತು ಪರಿಕಲ್ಪನೆಗೊಳಿಸಿ ಮುನ್ನಡೆಸಲು ಸಚಿವರಾದ ಡಾ. ಎಂ.ಸಿ. ಸುಧಾಕರ್, ಡಾ. ಶರಣಪ್ರಕಾಶ್ ಪಾಟೀಲ, ಶಾಸಕರಾದ ಡಾ. ಮಂಜುನಾಥ ಭಂಡಾರಿ, ಕುಲಪತಿಗಳಾದ ಪ್ರೊ. ಜಯಕರ್, ಪ್ರೊ. ಭಗವಾನ್ ಬೆಂಬಲ ನೀಡಿದ್ದಾರೆ.
ಈ ಸಹಯೋಗವು ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ಅವಕಾಶಗಳನ್ನು, ಅಧ್ಯಾಪಕರಿಗೆ ಅಂತರಾಷ್ಟ್ರೀಯ ಸಂಶೋಧನಾ ವೇದಿಕೆಗಳನ್ನು ಮತ್ತು ಕರ್ನಾಟಕದ ಶೈಕ್ಷಣಿಕ ಸಂಸ್ಥೆಗಳಿಗೆ ಜಾಗತಿಕ ಪ್ರಾಮುಖ್ಯತೆಯನ್ನು ತಂದುಕೊಡಲಿದೆ.

















