ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಕೃಷ್ಣನಿಗೆ ಪುತ್ತಿಗೆ ಶ್ರೀಗಳಿಂದ ಅರ್ಘ್ಯ ಪ್ರದಾನ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಚಾಮರ ಸೇವೆಯನ್ನು ಮಾಡಿ, ಪುತ್ತಿಗೆ ಕಿರಿಯ ಶ್ರೀಪಾದರು ರಾತ್ರಿ ಪೂಜೆಯನ್ನು ಮಾಡಿದರು.

ನಂತರ ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಶೇಷ ಪೂಜೆಯನ್ನು ಪುತ್ತಿಗೆ ಮಠದ ಉಭಯ ಶ್ರೀಪಾದರು ಮಾಡಿ ರಾತ್ರಿ 12.11ರ ರೋಹಿಣಿ ನಕ್ಷತ್ರದ ಸುಮುಹೂರ್ತದಲ್ಲಿ ಶ್ರೀ ಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಿದರು. ನಂತರ ತುಳಸಿ ಕಟ್ಟೆಯಲ್ಲಿ ಚಂದ್ರನಿಗೆ ಉಭಯ ಶ್ರೀಪಾದರು ಅರ್ಘ್ಯ ಪ್ರಧಾನ ಮಾಡಿದರು. ನಂತರ ಪುತ್ತಿಗೆ ಮಠದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ, ರತೀಶ್ ತಂತ್ರಿ , ವಿಷ್ಣುಮೂರ್ತಿ ಉಪಾಧ್ಯ ಮೊದಲಾದವರು ಶ್ರೀ ಕೃಷ್ಣನಿಗೆ ಅರ್ಘ್ಯ ಪ್ರಧಾನ ಮಾಡಿದರು. ನೆರೆದಿದ್ದ ಅಪಾರ ಸಂಖ್ಯೆಯ ಭಕ್ತರು ಕೃಷ್ಣನಿಗೆ ಅರ್ಘ್ಯ ಪ್ರಧಾನ ಮಾಡಿದರು.