ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಬಹುಮಾನ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ದಿನಾಂಕ 15 ಮತ್ತು 16 ಸೆಪ್ಟೆಂಬರ್ 2025 ರಂದು ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಂಗಳೂರು ಇಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಬಹುಮಾನ ಪಡೆದಿರುತ್ತಾರೆ.

ಈ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗವು ಎರಡನೇ ಸ್ಥಾನ ಪಡೆದರೆ, ಪರುಷರ ವಿಭಾಗವು ತೃತೀಯ ಸ್ಥಾನವನ್ನು ಪಡೆದಿದೆ. ಮಹಿಳೆಯರ ವಿಭಾಗವು ದಿನಾಂಕ 22 ಮತ್ತು 23 ಸೆಪ್ಟೆಂಬರ್ 2025 ರಂದು ಬಿಎಮ್‍ಎಸ್ ಇಂಜಿನಿಯರಿಂಗ್ ಕಾಲೇಜು ಬೆಂಗಳೂರು ಇಲ್ಲಿ ನಡೆಯುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಸ್ಪರ್ಧಿಸಲು ಅರ್ಹತೆ ಪಡೆದಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.