ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನ: ಉಚ್ಚಿಲ ದಸರಾ 2025 ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ

ಕಾಪು: ಶ್ರೀಕ್ಷೇತ್ರ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯಲಿರುವ ಉಡುಪಿ -ಉಚ್ಚಿಲ ದಸರಾ 2025ರ ಪ್ರಯುಕ್ತ ವಿಶೇಷವಾಗಿ ಜೋಡಿಸಲಾಗಿರುವ ವೈವಿಧ್ಯಮಯ ವಿದ್ಯುತ್ ದೀಪಾಲಂಕಾರಕ್ಕೆ ಸೆ.21ರಂದು ಚಾಲನೆ ನೀಡಲಾಯಿತು.

ಉಡುಪಿ ಉಚ್ಚಿಲ ದಸರಾ ರೂವಾರಿ ಡಾ.ಜಿ.ಶಂಕರ್ ಉದ್ಘಾಟಿಸಿದರು. ದೇವಸ್ಥಾನ, ರಥಬೀದಿ, ಶಾಲಿನಿ ಜಿ.ಶಂಕರ್ ತೆರೆದ ವೇದಿಕೆ ಮತ್ತು ಶಾರದಾ ಮೂರ್ತಿಯನ್ನು ನವದುರ್ಗೆಯರು ಪ್ರತಿಷ್ಠಾಪಿಸುವ ದಸರಾ ಮಂಟಪ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಿಂದ ಪಡುಬಿದ್ರಿಯವರೆಗೆ, ಪಡುಬಿದ್ರಿಯಿಂದ ಕಾಪುವಿನ ವರೆಗೆ ಕೊಪ್ಪಲಂಗಡಿಯಿಂದ ಕಾಪು ಬೀಚ್‌ವರೆಗೆ ರಸ್ತೆಯುದ್ದಕ್ಕೂ ವಿದ್ಯುತ್ ದೀಪಾಲಂಕಾರವನ್ನು ಜೋಡಿಸಲಾಗಿದೆ.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಸುವರ್ಣ ಬೆಳ್ಳಂಪಳ್ಳಿ, ಉಪಾಧ್ಯಕ್ಷರಾದ ಮೋಹನ್ ಬೇಂಗ್ರೆ, ದಿನೇಶ್ ಎರ್ಮಾಳು, ಕಾರ್ಯದರ್ಶಿ ಶರಣ ಕುಮಾರ್ ಮಟ್ಟು, ಕ್ಷೇತ್ರಾಡಳಿಯ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾ ದೀಪ ಸುನೀಲ್, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉದ್ಯಮಿ ಸಾಧು ಸಾಲ್ಯಾನ್, ಶ್ರೀಪತಿ ಭಟ್, ಉಷಾ ರಾಣಿ ಮಂಗಳೂರು, ಮನೋಜ್ ಕಾಂಚನ್, ಸುಜಿತ್ ಸಾಲ್ಯಾನ್, ಸತೀಶ್ ಕಾಂಚನ್, ಶಿವಕುಮಾರ್ ಮೆಂಡನ್, ಸುಗುಣ ಕರ್ಕೇರ ಮತ್ತು ದೇವಳದ ಪ್ರಧಾನ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ಉಪಸ್ಥಿತರಿದ್ದರು.