ಉಡುಪಿ: ದೊಡ್ಡಣಗುಡ್ಡೆೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ನವಶಕ್ತಿ ವೇದಿಕೆಯಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ವೈಭವಕ್ಕೆೆ ಚಾಲನೆ ಕಾರ್ಯಕ್ರಮದಲ್ಲಿ ಕ್ಷೇತ್ರದ ವತಿಯಿಂದ ಕ್ಷೇತ್ರದ ಆವರಣದಲ್ಲಿ ನಡೆಯುತ್ತಿರುವ ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಪ್ರಾಾಥಮಿಕ ಪಡೆದ ವಿದ್ಯಾರ್ಥಿನಿ, ಪ್ರಸ್ತುತ ಎಂಬಿಬಿಎಸ್ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಡೆದ ನಿಧಿಶ್ರೀ ಪ್ರಸಾದ್ ಹೆಗ್ಡೆೆ ಅವರನ್ನು ಸಮ್ಮಾನಿಸಲಾಯಿತು.
ಸಮ್ಮಾನಿಸಿದ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾತನಾಡಿ, ಕ್ಷೇತ್ರ ನಿರ್ಮಾಣಕ್ಕೆೆ ಕಾರಣೀಭೂತವಾದ ಶಿಕ್ಷಣ ಸಂಸ್ಥೆೆ ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತ ಅದೆಷ್ಟೋ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಶ್ರೇಯಸ್ಸನ್ನು ಕಂಡುಕೊಂಡಿರುವುದಕ್ಕೆೆ ಅತ್ಯಂತ ಹೆಮ್ಮೆಯಾಗುತ್ತಿದೆ. ನಿಧಿಶ್ರೀ ನಮ್ಮ ಶಾಲೆಯಲ್ಲಿ ಕಲಿತ ವಿದ್ಯಾರ್ಥಿನಿ ಎಂಬುದು ನಮಗೆ ಇನ್ನಷ್ಟು ಬಿಗುಮಾನ ತಂದುಕೊಟ್ಟಿದೆ. ಮುಂದಿನ ದಿನಗಳಲ್ಲಿ ಶಾಲೆಗೆ ನೂತನ ಕಟ್ಟಡ ನಿರ್ಮಿಸುವುದರೊಂದಿಗೆ ಇನ್ನಷ್ಟು ಆಧುನಿಕ ಸೌಕರ್ಯಗಳನ್ನು ಒದಗಿಸುವ ಗುರಿಯನ್ನು ಆಡಳಿತ ಮಂಡಳಿ ಹೊಂದಿದೆ ಎಂದು ಶುಭ ಹಾರೈಸಿದರು.
ನಿಧಿಶ್ರೀಯವರ ಹೆತ್ತವರಾದ ನ್ಯಾಯವಾದಿ ಶಿವಪ್ರಸಾದ್ ಹೆಗ್ಡೆೆ, ಪ್ರಶಾಂತಿ ಎಸ್. ಹೆಗ್ಡೆೆ ಅವರು, ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ, ನೈತಿಕ ಶಿಕ್ಷಣ, ಧಾರ್ಮಿಕತೆದೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರಕುತ್ತಿದೆ. ವಿದ್ಯಾಾರ್ಥಿಗಳ ಬದುಕಿಗೆ ಪೂರಕವಾದ ಶಿಕ್ಷಣ ಇಲ್ಲಿ ಸಿಗುತ್ತಿರುವುದರಿಂದ ಸುದೃಢ ಸಮಾಜ ನಿರ್ಮಾಣಕ್ಕೆೆ ಈ ಶಾಲೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದರು.ಶಾಲೆಯ ಮುಖ್ಯಶಿಕ್ಷಕಿ ಉಷಾ ರಮಾನಂದ, ಶಾಲಾ ಸಂಯೋಜಕಿ ಕುಸುಮಾ ನಾಗರಾಜ್, ವಿ ವಿಖ್ಯಾತ್ ಭಟ್, ಕಲಾವತಿ ಉಪಸ್ಥಿತರಿದ್ದರು.

ಕ್ಯಾಪ್ಷನ್: ಅಲಂಕಾರ
ಉಡುಪಿ: ದೊಡ್ಡಣಗುಡ್ಡೆೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ 3ನೇ ದಿನ ಮಂಗಳವಾರ ದೇವಿಯನ್ನು ಚಂದ್ರಘಂಟಾ ದೇವಿಯಾಗಿ ಅಲಂಕರಿಸಲಾಯಿತು.


















