ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ-ಕೆಂಜಾರು ಗ್ರಾಮದ ಕಾಪಿಕಾಡು ಗುಡ್ಡೆ ಮನೆ ನಿವಾಸಿ ಟೀನಾ (23) ಎಂಬಾಕೆ ನಾಪತ್ತೆಯಾದ ಬಗ್ಗೆ ಪ್ರಕರಣ ದಾಖಲಾಗಿದೆ.
ಸುಮಾರು 5.1 ಅಡಿ ಎತ್ತರದ, ಗೋಧಿ ಮೈ ಬಣ್ಣದ ಈಕೆ ಕೊಂಕಣಿ, ಇಂಗ್ಲಿಷ್, ಹಿಂದಿ, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಕಾಣೆಯಾದ ಯುವತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಮನವಿ ಮಾಡಿದ್ದಾರೆ.


















