ಉಡುಪಿ: ಎಕೆಎಂಎಸ್ ಸೈಫ್ ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ.

ಉಡುಪಿ: ಮಲ್ಪೆ ಕೊಡವೂರಿನ ಸಾಲ್ಮರದಲ್ಲಿ ನಡೆದ ಎಕೆಎಂಎಸ್ ಬಸ್ ಮಾಲೀಕ ಸೈಫ್ ಕೊಲೆ ಪ್ರಕರಣಕ್ಕೆ‌ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಮಿಷನ್ ಕಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27), ಕರಂಬಳ್ಳಿ ಕುಂಜಿಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕುರ್ (43) ಬಂಧಿತ ಆರೋಪಿಗಳು. ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಿ.ಟಿ. ಪ್ರಭು ಅವರ ಮಾರ್ಗದರ್ಶನದಲ್ಲಿ, ಮಲ್ಪೆ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಯಿತು. ಕೊಲೆ ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನಷ್ಟು ಮಾಹಿತಿ ಕಲೆಹಾಕಲು ಪೊಲೀಸರು ಶೋಧ ನಡೆಸುತ್ತಿದ್ದಾರೆ‌.